ಮಾಜಿ ವಿಧಾನಪರಿಷತ್ ಸಭಾಪತಿ, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಬಸವರಾಜ ಹೊರಟ್ಟಿ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರಿದರು. ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಲಾಯಿತು.
ಈ ಸಂದರ್ಭಧಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ, ಅರಗ ಜ್ಞಾನೇಂದ್ರ, ಸಿ. ಸಿ. ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು